ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ 2020ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕಿ.ಬಿ. ಕಿರಣಸಿಂಗ್ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ದರದಲ್ಲಿ ಪುಸ್ತಕಗಳು ದೊರೆಯುತ್ತದೆ. ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ಸೈಟ್ದಲ್ಲಿ ಆನ್ಲೈನ್ನಲ್ಲಿ ಕೂಡ ಈ ಶೇ.50ರ ರಿಯಾಯಿತಿ ದರದಲ್ಲಿ ಪುಸ್ತಕಗಳು ಲಭ್ಯವಿರುತ್ತವೆ.
ಇದಲ್ಲದೇ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು www.kannadapustakapradhikara.com ಅಂತರ್ಜಾಲದಲ್ಲಿ ಕೂಡ ಶೇಕಡಾ 50ರ ರಿಯಾಯಿತಿಯಲ್ಲಿ ದಲ್ಲಿ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್ ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
Share your comments