ಕಳೆದ ಎರಡು ವಾರಗಳಿಂದ ಉತ್ತರ ಭಾರತದ ಹಲವು ಭಾಗದಲ್ಲಿ ವಿಪರೀತ ಚಳಿ ಕಾಣಿಸಿಕೊಂಡಿದ್ದು, ಜನ ಚಳಿಯಿಂದ ತತ್ತರಿಸುವಂತಾಗಿದೆ.
pm kisan update| ಪಿ.ಎಂ ಕಿಸಾನ್ 13ನೇ ಕಂತಿಗೆ ಮೊದಲು ಈ ಅಪ್ಡೇಟ್ ಮಾಡಿ
ಇನ್ನೂ ಆಘಾತಕಾರಿ ವಿಷಯವೆಂದರೆ, ಚಳಿ ಹಾಗೂ ನಿರಂತರ ಮಂಜಿನ ವಾತಾವರಣದಿಂದಾಗಿ ಹಲವರು ಮೃತಪಟ್ಟಿರುವುದು ವರದಿ ಆಗಿದೆ.
ಮಂಜು ಮುಸುಕಿದ ವಾತಾವರಣ ಹಿನ್ನೆಲೆಯಲ್ಲಿ ಹಲವೆಡೆ ರೈಲು ಸಂಚಾರ ಹಾಗೂ ವಿಮಾನಗಳ ಹಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದಿದೆ. ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಲ್ಲಿನ ಶಾಲೆಗಳಿಗೆ ಸರ್ಕಾರ ರಜೆ ಘೋಷಣೆ ಮಾಡಿದೆ.
ಭೀಕರ ಚಳಿ ಉತ್ತರಪ್ರದೇಶದ ಕಾನ್ಪುರ ಒಂದರಲ್ಲಿಯೇ 98 ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಚಿನ್ನದ ದರದಲ್ಲಿ ಮತ್ತೆ ಏರಿಕೆ, ಎಷ್ಟಿದೆ ಇಂದಿನ ಚಿನ್ನದ ದರ ?
ನಗರದ ಎಲ್‌ಪಿಎಸ್ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ನೀಡಿರುವ ವರದಿ ಅನ್ವಯ ಕಳೆದೊಂದು ವಾರದಲ್ಲೇ ನಗರದಲ್ಲಿ 98 ಜನರು ಹೃದಯಾಘಾತ ಮತ್ತು ಮೆದುಳಿನ ಸಮಸ್ಯೆಯಿಂದಾಗಿ ಸಾವನ್ನಪ್ಪಿದ್ದಾರೆಂದು ಹೇಳಿದೆ.
ಕಾನ್ಪುರದ ಲಕ್ಷ್ಮೀಪತ್ ಸಿಂಘಾನಿಯಾ ಇನ್ ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆ ನೀಡಿರುವ ಮಾಹಿತಿ ಪ್ರಕಾರ ಗುರುವಾರ ಒಂದೇ ದಿನ 723 ರೋಗಿಗಳು ಹೃದಯ ಸಂಬಂಧಿ ಸಮಸ್ಯೆ ವಿಷಯದಲ್ಲಿ ತುರ್ತು ಮತ್ತು ಹೊರರೋಗಿಗಳ ವಿಭಾಗಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಇನ್ನು ಜಮ್ಮು ಮತ್ತು ಕಾಶ್ಮೀರ, ದೆಹಲಿ, ಪಂಬಾಜ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಉಷ್ಣಾಂಶದ ಪ್ರಮಾಣವು ಭಾರೀ ಕುಸಿತ ಕಂಡಿದೆ. ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರಿದೆ.
ಮಂಜು ಮುಸುಕಿದ ವಾತಾವರಣವಿದೆ. ಉತ್ತಪ್ರದೇಶದ ಆಗ್ರಾ, ಪಂಜಾಜ್‌ನ ಭಠಿಂಡಾದಲ್ಲಿ ಗೋಚರತೆ ತೀವ್ರವಾಗಿ ಕುಸಿತ ಕಂಡಿದೆ. ಹೀಗಾಗಿ ಭಾನುವಾರ 480ಕ್ಕೂ ಹೆಚ್ಚು ರೈಲುಗಳ ಓಡಾಟದಲ್ಲಿ ಏರುಪೇರಾಗಿದೆ. ಜೊತೆಗೆ 25 ವಿಮಾನಗಳ ಹಾರಾಟದಲ್ಲೂ ವ್ಯತ್ಯಯಗಳು ಕಂಡು ಬಂದಿವೆ.
Aadhaar Card| ಆಧಾರ್ ಕಾರ್ಡ್ ನವೀಕರಣ: UIDAI ಟೋಲ್ ಫ್ರೀ ಸಂಖ್ಯೆ ಪರಿಚಯ
ಕಾನ್ಪುರದಲ್ಲಿ ನಗರದಲ್ಲಿ ಕಳೆದ 15 ದಿನಗಳಿಂದ ಕನಿಷ್ಠ ಉಷ್ಣಾಂಶ 4ರಿಂದ 6 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ತೀವ್ರ ಚಳಿಯಿಂದಾಗಿ ರಕ್ತದೊತ್ತಡದಲ್ಲಿ ಏರುಪೇರಾಗಿ, ರಕ್ತ ಹೆಪ್ಪುಗಟ್ಟಿ ಮಿದುಳು ಹಾಗೂ ಹೃದಯಾಘಾತ ಸಂಭವಿಸುತ್ತಿದೆ. ಚಳಿಯಿಂದಾಗಿ ಕೇವಲ ವೃದ್ದರಷ್ಟೇ ಅಲ್ಲದೆ, ಮಧ್ಯವಯಸ್ಕರಿಗೂ ಹೃದಯ, ಮಿದುಳು ಆಘಾತ ಸಂಭವಿಸಿದೆ ಎನ್ನಲಾಗಿದೆ.
ಶಾಲೆಗಳಿಗೆ ರಜೆ ಘೋಷಣೆ
ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಜನವರಿ 15ರವರೆಗೆ ದೆಹಲಿಯಲ್ಲಿ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ
ಘೋಷಿಸಲಾಗಿದೆ. ಈ ಬಗ್ಗೆ ದೆಹಲಿ ಸರ್ಕಾರದ ಸೂಚನೆಯಂತೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.
9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ. ರಜೆ ಇದ್ದರೂ ಶೈಕ್ಷಣಿಕ ಕಾರ್ಯಕ್ಷಮತೆ ಬಗ್ಗೆ ಗಮನಹರಿಸಲಾಗುವುದು ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯ ತಿಳಿಸಿದೆ.
ಸೋಮವಾರ ಬೆಳಿಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ಜನ ತೀವ್ರ ಚಳಿಯಿಂದ ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಹೊರ ಬರಲು ಜನ ನಡುಗುತ್ತಿರುವುದು ಕಂಡುಬಂದಿದೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 20 ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿತ್ತು.
ಇನ್ನು ಎರಡು ದಿನಗಳಲ್ಲಿ ದೆಹಲಿಯಲ್ಲಿ ಚಳಿ ತೀವ್ರ ವಿಕೋಪದ ಮಟ್ಟವನ್ನು ಮುಟ್ಟುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ದೆಹಲಿಯ ಪೆರೇಡ್: ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ!
Share your comments