ರಾಜ್ಯದ (Karnataka CM) ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಆಯ್ಕೆಯಾಗಿದ್ದಾರೆ.
ಗುರುವಾರ ಮಧ್ಯಾಹ್ನ 3.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರವಾದ ಪೈಪೋಟಿ ಇತ್ತು.
ಎಲ್ಲ ಪೈಪೋಟಿ ಚರ್ಚೆಗಳ ನಂತರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಪದಗ್ರಹಣಕ್ಕೆ ಸಿದ್ಧತೆಯೂ ನಡೆದಿದೆ.
Karnataka CM ಮೊತ್ತೊಮ್ಮೆ ಸಿದ್ದರಾಮಯ್ಯ ದರ್ಬಾರ್; ಎರಡನೇ ಬಾರಿ ಸಿ.ಎಂ
ರಾಜ್ಯದ ಜನರ ವಿಶ್ವಾಸ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಹಾಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಬೇಕು
ಎಂದು ರಾಜ್ಯದಲ್ಲಿ ಜನಾಭಿಪ್ರಾಯ ಮೂಡಿತ್ತು.
ಚುನಾವಣೆ ಸಂದರ್ಭದಲ್ಲಿ ಹಲವು ಮಾಧ್ಯಮಗಳು ನಡೆಸಿದ ಸರ್ವೇ ಹಾಗೂ ಸಮೀಕ್ಷೆಗಳಲ್ಲಿ ಸಿದ್ದರಾಮಯ್ಯ
ಅವರೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು.
ಶಾಸಕರ ಬೆಂಬಲ ಕಾರಣ: ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡುವಲ್ಲಿ ಪ್ರಮುಖವಾಗಿ
ಅವರಿಗೆ ಇರುವ ಶಾಸಕರ ಬೆಂಬಲವೂ ಕಾರಣ ಎಂದು ಹೇಳಲಾಗಿದೆ.
ಹಲವು ಶಾಸಕರು ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಹೋಲಿಕೆ ಮಾಡಿದರೆ, ಸಿದ್ದರಾಮಯ್ಯ ಅವರಿಗೆ ಹೆಚ್ಚು ಬೆಂಬಲ ವ್ಯಕ್ತವಾಗಿತ್ತು.
ಲೋಕಸಭೆ ಚುನಾವಣೆ: ಇನ್ನು 10 ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಸುಸೂತ್ರ ಹಾಗೂ ಸಮರ್ಥವಾದ ಆಡಳಿತ ನಡೆಯಬೇಕಿದೆ.
ಇಲ್ಲದಿದ್ದರೆ, ಇದು ರಾಜ್ಯದ ಮತದಾರರ ಮೇಲಷ್ಟೇ ಅಲ್ಲದೇ ದೇಶದಲ್ಲಿಯೂ ಕೆಟ್ಟ ಅಭಿಪ್ರಾಯ ಮೂಡಲಿದ್ದು,
ಇದರಿಂದ ಕಾಂಗ್ರೆಸ್ ಪಕ್ಷದ ಮೇಲೆ ಕೆಟ್ಟ ಅಭಿಪ್ರಾಯ ವ್ಯಕ್ತವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ
ಹೈಕಮ್ಯಾಂಡ್ ಈ ನಿರ್ಧಾರ ತೆಗೆದುಕೊಂಡಿರುವ ಸಾಧ್ಯತೆ ಇದೆ.
ಅಲ್ಲದೇ ಈಗಾಗಲೇ ಒಂದು ಅವಧಿಗೆ ಸಿದ್ದರಾಮಯ್ಯ ಅವರು ಅಂದರೆ ಐದು ವರ್ಷಗಳ ಪೂರ್ಣ ಅವಧಿಗೆ ಆಡಳಿತ ನಡೆಸಿದ್ದು,
ಉತ್ತಮ ಆಡಳಿತ ನೀಡಿದ್ದಾರೆ ಎನ್ನುವ ಅಂಶವನ್ನು ಜನ ನೆನಪಿಸಿಕೊಂಡಿದ್ದಾರೆ.
ಹೀಗಾಗಿ, ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಇದೀಗ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವ ಸಾಧ್ಯತೆಗಳು ಇವೆ.
ಸರಣಿ ಸಭೆಗಳಿಗೆ ಸಾಕ್ಷಿಯಾಗಿದ್ದ ಖರ್ಗೆ ಮನೆ!
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನವದೆಹಲಿಯ ಮನೆಯಲ್ಲಿ ಕಳೆದ ಐದು
ದಿನಗಳಿಂದಲೂ ರಾಜ್ಯದ ಮುಖ್ಯಮಂತ್ರಿ ಅವರ ಆಯ್ಕೆಗೆ ಸಂಬಂಧಿಸಿದಂತೆ ಕಸರತ್ತುಗಳು ನಡೆದಿತ್ತು.
ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ತೀವ್ರವಾದ ಪೈಪೋಟಿ ನಡೆದಿತ್ತು.
ಹೀಗಾಗಿ, ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಸರಣಿ ಸಭೆಗಳು ನಡೆದಿದ್ದವು.
ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವುದು ಹೈಕಮಾಂಡ್ ಮತ್ತು ಹಿರಿಯ ನಾಯಕರಿಗೆ ಸವಾಲಾಗಿ ಪರಿಣಮಿಸಿತ್ತು.
ಕೊನೆಗೂ ಅಂತಿಮವಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದಾರೆ.
ಅಭಿಮಾನಿಗಳ ಸಂಭ್ರಮಾಚರಣೆ
ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಆಯ್ಕೆಯಾಗಲಿದ್ದಾರೆ ಎನ್ನುವುದು
ಖಚಿತವಾಗುತ್ತಿದ್ದಂತೆಯೇ ರಾಜ್ಯದ ವಿವಿಧ ಭಾಗದಲ್ಲಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡರು.
ಸಿದ್ದರಾಮಯ್ಯ ಅವರು ಸಿ.ಎಂ ಆಯ್ಕೆಯಾಗಲಿದ್ದಾರೆ ಎನ್ನುವುದು ಖಚಿತವಾಗುತ್ತಿದ್ದಂತೆಯೇ
ಬೆಂಗಳೂರಿನ ಅವರ ಸರ್ಕಾರಿ ಕಚೇರಿಯ ಮುಂದೆ ಜಮಾಯಿಸಿದ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
Share your comments