ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಎನ್.ಎಸ್.ಪಿ. ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ 2021ರ ಮಾರ್ಚ್ 31 ರೊಳಗಾಗಿ ಎಲ್ಲಾ ಅವಶ್ಯಕ ದಾಖಲಾತಿಗಳೊಂದಿಗೆ ಎಸ್.ಎಸ್.ಪಿ. ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮಹಿಮೂದ್ ಅವರು ತಿಳಿಸಿದ್ದಾರೆ.
ಮೆಟ್ರಿಕ್ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಭಾರತ ಸರ್ಕಾರದ ಎನ್.ಎಸ್.ಪಿ. ಅಡಿಯಲ್ಲಿ ಈಗಾಗಲೇ ಹೊಸದಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ https://ssp.karnataka.gov.in ದಲ್ಲಿ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಅದೇ ರೀತಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳು ಭಾರತ ಸರ್ಕಾರದ ಎನ್.ಎಸ್.ಪಿ. ಅಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ರಾಜ್ಯ ವಿದ್ಯಾರ್ಥಿವೇತನ https://ssp.postmatirc.karnataka.gov.in ಪೋರ್ಟಲ್ದಲ್ಲಿ ಮೇಲ್ಕಂಡ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿ ವೇತನಕ್ಕಾಗಿ ಎನ್.ಎಸ್.ಪಿ. ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಎಲ್ಲಾ ಅರ್ಹ ವಿದ್ಯಾರ್ಥಿಗಳು ಅನ್ಲೈನಲ್ಲಿ ಅವಶ್ಯಕ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-247260ಗೆ ಸಂಪರ್ಕಿಸಲು ಕೋರಲಾಗಿದೆ.
Share your comments