1. ಸುದ್ದಿಗಳು

Annabhagya ಅನ್ನಭಾಗ್ಯ ಯೋಜನೆ ಜಾರಿ ನೆರೆಯ ರಾಜ್ಯಗಳ ಮೊರೆ!

Hitesh
Hitesh
The state government approached the neighboring states to implement Annabhagya Yojana

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ನೀಡಿರುವ ಐದು ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಅನುಷ್ಠಾನ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ.

ಈ ಯೋಜನೆ ಜಾರಿಗೆ ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಸಹಕಾರ ಲಭ್ಯವಾಗಿಲ್ಲ. ಹೀಗಾಗಿ, ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಜಾರಿಗೆ

ಅವಶ್ಯವಿರುವ ಅಕ್ಕಿಯನ್ನು ನೆರೆಯ ರಾಜ್ಯಗಳಿಂದ ಖರೀದಿಸಲು ತೀರ್ಮಾನಿಸಿದೆ.

ಈ ಸಂಬಂಧ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಗುರುವಾರ ಸಚಿವ ಸಂಪುಟ ಸಭೆಗೂ ಮುನ್ನ ಅನ್ನಭಾಗ್ಯ ಯೋಜನೆ ಜಾರಿಗೆ ಇರುವ ಪರ್ಯಾಯ ಮಾರ್ಗಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಗೂ ಸಚಿವ ಕೆ.ಎಚ್‌. ಮುನಿಯಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಕೇಂದ್ರದಿಂದ ಅಕ್ಕಿ ಸಿಗದೆ ಇದ್ದರೆ ಪರ್ಯಾಯವಾಗಿ

ಯೋಜನೆಯನ್ನು ರೂಪಿಸಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದರು.  

ಈ ಸಂಬಂಧ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ

ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕನ್ನಡಿಗರ,

ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು  ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ

ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ 

ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ  ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು  ಪತ್ರ ಬರೆಯಲಾಗಿತ್ತು.

ರಾಜಕೀಯ ಸ್ವರೂಪ: ಅನ್ನಭಾಗ್ಯ ಯೋಜನೆ ಜಾರಿಯೂ ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ಅಲ್ಲದೇ ಕಾಂಗ್ರೆಸ್‌ ಹಾಗೂ ಬಿಜೆಪಿ ಸರ್ಕಾರ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.

ಅಕ್ಕಿ ಸರಬರಾಜು ಸ್ಥಗಿತ: ಕೇಂದ್ರ ಸರ್ಕಾರವು ಈ ನಡುವೆ ಮುಕ್ತ ಮಾರುಕಟ್ಟೆಯಲ್ಲಿ ಯಾವುದೇ ರಾಜ್ಯಕ್ಕೆ ಅಕ್ಕಿ

ಹಾಗೂ ಗೋಧಿ ಸರಬರಾಜು ಮಾಡುವುದನ್ನು ಸ್ಥಗಿತ ಮಾಡಿ ಆದೇಶ ಮಾಡಿದೆ.

ಕೇಂದ್ರ ಸರ್ಕಾರವು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯನ್ನು ರದ್ದು ಮಾಡಿದೆ.

ಈ ಯೋಜನೆಯ ಮೂಲಕ ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ರಾಜ್ಯದ ಯೋಜನೆಗೆ ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಹಕಾರ ಸಿಗದೆ ಇರುವುದರಿಂದ ರಾಜ್ಯ

ಸರ್ಕಾರವು ನೆರೆಯ ತೆಲಂಗಾಣ, ಛತ್ತೀಸ್‌ಗಡ್‌ ಹಾಗೂ ಪಂಜಾಬ್‌ ರಾಜ್ಯದಿಂದ ಅಕ್ಕಿ ಖರೀದಿ ಮಾಡುವ

ಸಂಬಂಧ ಚರ್ಚೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.  

ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು  ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌

ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ

ಮಂಡಳಿ  ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ  ಮೆ.ಟನ್ ಅಗತ್ಯವಿದೆಎಂದು ಕೋರಿ ಜೂನ್‌ 9 ರಂದು  ಪತ್ರ ಬರೆಯಲಾಗಿತ್ತು.

ಇದಕ್ಕೆ  ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು.

ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ.

ಜೂನ್ 13 ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ

ಬರೆದು 15 ಲಕ್ಷ ಮೆ.ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ  ಯೋಜನೆಯಡಿ

(ಒ.ಎಂಎಸ್.ಎಸ್ ಡಿ) ಮಾರಾಟ ಮಾಡಲು ಸೂಚಿಸಿದೆ ಎಂದು ಅವರು ಹೇಳಿದ್ದಾರೆ.  

Heavy rain ರಾಜ್ಯದ ಹಲವು ಭಾಗದಲ್ಲಿ ಮುಂದುವರಿದ ಧಾರಾಕಾರ ಮಳೆ

Published On: 16 June 2023, 02:25 PM English Summary: The state government approached the neighboring states to implement Annabhagya Yojana

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.