ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿದಿದ್ದು, ಅಲ್ಲಲ್ಲಿ ಮಳೆ ಆಗಿರುವುದು ವರದಿ ಆಗಿದೆ.
ರಾಜ್ಯದಲ್ಲಿ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿದಿದ್ದು, ಅಲ್ಲಲ್ಲಿ ಮಳೆ ಆಗುತ್ತಿದೆ.
ಉಳಿದಂತೆ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡುಬಂದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿತ್ತು.
ರಾಜ್ಯದ ಯಾವುದೇ ಭಾಗದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಮಳೆ ಆಗಿರುವುದು ವರದಿ ಆಗಿಲ್ಲ.
ಇನ್ನು ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶವು ರಾಯಚೂರಿನಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿರುವುದು ವರದಿ ಆಗಿದೆ.
ಇನ್ನು ಗುರುವಾರವರದ ವರೆಗೆ ರಾಜ್ಯದಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಇನ್ನು ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಹಾಗೂ ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Gold ಚಿನ್ನ ಖರೀದಿದಾರರಿಗಗೆ ಸಿಹಿಸುದ್ದಿ: ಚಿನ್ನದ ಬೆಲೆ ಇಳಿಕೆ!
ಇನ್ನುಳಿದಂತೆ ರಾಜ್ಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆ ಆಗುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿಲ್ಲ.
ಗರಿಷ್ಠ ಉಷ್ಣಾಂಶ
ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಲಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ರಾಜ್ಯದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲದೆ ಇರುವುದರಿಂದ ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ.
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಇನ್ನು ಗರಿಷ್ಠ ಉಷ್ಣಾಂಶವು 35 ಮತ್ತು
ಕನಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿದ್ದು, ಗರಿಷ್ಠ ಉಷ್ಣಾಂಶವು 35 ಮತ್ತು
ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ದೇಶದಲ್ಲೇ ಅತೀ ಹೆಚ್ಚು ಡಿಜಿಟಲ್ ವಹಿವಾಟು ಬೆಂಗಳೂರಿನಲ್ಲಿ!
Karnataka Election ಲಿಂಗಾಯತ ಸಮುದಾಯದ ಮತ ಸೆಳೆಯಲು ಪಕ್ಷಗಳ ಸರ್ಕಸ್: ಡ್ಯಾಮೇಜ್ ಕಂಟ್ರೋಲ್‌ಗೆ ಬಿಜೆಪಿ ಪ್ಲಾನ್ !
ಬಿ.ವೈ.ವಿಜಯೇಂದ್ರ ಮತ್ತು ಕುಟುಂಬದವರ ಬಳಿ ಇಷ್ಟು ಕೋಟಿ ರೂ ಆಸ್ತಿ!
Climate Change ಭಾರತದಲ್ಲಿ ಬದಲಾಗುತ್ತಿದೆ ಹವಾಮಾನ ಕಾರಣವೇನು ಗೊತ್ತೆ ?
Indian Railways ಕಳೆದ ಹಣಕಾಸು ವರ್ಷದಲ್ಲಿ ಭಾರತೀಯ ರೈಲ್ವೆ ಗಳಿಸಿದ ಆದಾಯ ಎಷ್ಟು?
Share your comments