ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ತಮಿಳುನಾಡಿನ ಚೆನ್ನೈನ ಮೈಲಾಪುರ ಪ್ರದೇಶದಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅವರು ಈ ವೇಳೆ ಕೆಲವು ಮಾರಾಟಗಾರರೊಂದಿಗೆ ಸಂವಾದ ನಡೆಸಿದ್ದು, ಈ ಪೋಟೋಗಳನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹಿಂಗಾರು ಬೆಳೆಗಳನ್ನು ಬಿತ್ತನೆ ಮಾಡುವ ಮೊದಲು ಇದನ್ನು ನೆನಪಿನಲ್ಲಿಡಿ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ನಿರ್ಮಲಾ ಸೀತಾರಾಮನ್ ಅವರು ಕೆಲವು ಸಿಹಿ ಗೆಣಸುಗಳನ್ನು ಖರೀದಿಸುತ್ತಿರುವದನ್ನು ಕಾಣಬಹುದು. ಈ ಸಂದರ್ಭದಲ್ಲಿ ಅವರು ಕೆಲವು ಮಾರಾಟಗಾರರೊಂದಿಗೆ ಸಂವಾದ ನಡೆಸಿದರು.
ಇದಕ್ಕೂ ಮುನ್ನ ನಗರದಲ್ಲಿ ವಿಶೇಷಚೇತನ ಮಕ್ಕಳ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಹಣದುಬ್ಬರದ ಬಗ್ಗೆ ಮಾತನಾಡಿ ಹಣದುಬ್ಬರವನ್ನು ಶೇಕಡಾ 4 ಕ್ಕಿಂತ ಕಡಿಮೆ ಮಾಡಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಹಿಂದೆ ಹೇಳಿದ್ದರು.
LPG Update: ಇನ್ಮುಂದೆ ಗ್ರಾಹಕರಿಗೆ ದೊರೆಯಲಿದೆ ವರ್ಷಕ್ಕೆ ಇಷ್ಟೇ ಸಿಲಿಂಡರ್‌ಗಳು! ಹೊಸ ನಿಯಮದಲ್ಲಿ ಸಬ್ಸಿಡಿ ಎಷ್ಟು ಗೊತ್ತೆ?
During her day-long visit to Chennai, Smt @nsitharaman made a halt at Mylapore market where she interacted with the vendors & local residents and also purchased vegetables. pic.twitter.com/emJlu81BRh
— NSitharamanOffice (@nsitharamanoffc) October 8, 2022
ಕೇಂದ್ರ ಸರ್ಕಾರವೂ ಇಂತಹ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರಿಗೆ ಅಗತ್ಯ ವಸ್ತುಗಳು ಸಮಂಜಸವಾದ ಬೆಲೆಯಲ್ಲಿ ಮತ್ತು ಸಮಯಕ್ಕೆ ಲಭ್ಯವಾಗುವಂತೆ ಮಾಡುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಕೆನರಾ ಬ್ಯಾಂಕ್ ಗ್ರಾಹಕರಿಗೆ ಗುಡ್‌ನ್ಯೂಸ್..666 ದಿನಗಳ ಸ್ಪೇಷಲ್ ಸ್ಕೀಂ ಆರಂಭ
ಹಣದುಬ್ಬರಕ್ಕೆ ಸಂಬಂಧಿಸಿದಂತೆ ಪ್ರತಿ ಬಾರಿ ಸಂಸತ್ತಿನಲ್ಲಿ ಅದಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ಹಣಕಾಸು ಸಚಿವರು ಹೇಳಿದರು. ಹಣದುಬ್ಬರ ದರವನ್ನು ನಿರ್ದಿಷ್ಟ ಮಟ್ಟಕ್ಕೆ ತರಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಉದಾಹರಣೆಗೆ, ಆಮದು ಮಾಡಿಕೊಳ್ಳುವ ಖಾದ್ಯ ತೈಲಗಳ ಮೇಲಿನ ಸುಂಕವನ್ನು ತೆಗೆದುಹಾಕಲಾಗಿದೆ. ಹಣದುಬ್ಬರದ ಸಮಸ್ಯೆಯನ್ನು ಜಾಗತಿಕ ದೃಷ್ಟಿಕೋನದಿಂದ ನೋಡಬೇಕು ಎಂದು ಹೇಳಿದರು.
Share your comments