1. ಸುದ್ದಿಗಳು

Vande Bharat : ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

Maltesh
Maltesh
Vande Bharat : Stone pelting at Vande Bharat train

ಕೇರಳದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ದೇಶದಲ್ಲಿ ಮತ್ತೊಂದು ಘಟನೆ ವರದಿ

ಕೇರಳದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.  ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಕೇರಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಈ ರೈಲು ಮಲಪ್ಪುರಂ ಜಿಲ್ಲೆಯ ತಿರುನಾವಯ ಮತ್ತು ತಿರೂರ್ ಮೂಲಕ ಸಾಗುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ.

ರೈಲು ಸಾಗುತ್ತಿದ್ದ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ದೇಶದ ಹಲವು ಭಾಗಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮೇಲೆ ಈಗಾಗಲೇ ಕಲ್ಲು ತೂರಾಟ ನಡೆಸಲಾಗಿದೆ. ಈ ಅನುಕ್ರಮದಲ್ಲಿ ಮತ್ತೊಂದು ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣ ವರದಿಯಾಗಿದೆ. ಕೇರಳದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ನಮ್ಮ ನಡೆ ಮತಗಟ್ಟೆಯ ಕಡೆಗೆ ಪ್ರಯುಕ್ತ ಜಾಥ ಮತ್ತು ಧ್ವಜಾರೋಹಣ

 ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದಂದು, ತಪ್ಪದೆ ಅರ್ಹರೆಲ್ಲರೂ ಮತದಾನ ಮಾಡುವಂತಾಗಲು ‘ನಮ್ಮ ನಡೆ ಮತಗಟ್ಟೆಯ ಕಡೆಗೆ’ ಕಾರ್ಯಕ್ರಮ ಪ್ರಯುಕ್ತ  ಮಡಿಕೇರಿ ಜಿಲ್ಲಾಡಳಿತ, ಸ್ವೀಪ್ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜಾಥವು ಭಾನುವಾರ ನಡೆಯಿತು.  

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದಂದು ಅರ್ಹರೆಲ್ಲರೂ ಮತ ಹಕ್ಕು ಚಲಾಯಿಸಬೇಕು ಎಂದು ಕೋರಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆ ನಿಟ್ಟಿನಲ್ಲಿ ಅರ್ಹರು ತಪ್ಪದೆ ಮತ ಚಲಾಯಿಸಬೇಕು ಎಂದು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ಹೇಳಿದರು.

ವಿಧಾನಸಭಾ ಚುನಾವಣೆ: 14.96 ಲಕ್ಷ ರೂ.ಮೌಲ್ಯದ ಸಾಮಗ್ರಿ ವಶಕ್ಕ

ವಿಧಾನಸಭೆ ಚುನಾವಣೆ-2023ರ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಕೊಪ್ಪಳದಲ್ಲಿ ಏಪ್ರೀಲ್ 30ರವರೆಗೆ 14.96 ಲಕ್ಷ ರೂ. ಮೌಲ್ಯದ 238 ಸೀರೆಗಳು, 107 ಟಿಶರ್ಟ್, 170 ಗ್ಯಾಸ್ ಸ್ಟೌವ್, 10 ರೇಷನ್ ಕಿಟ್, 40 ಅಕ್ಕಿ ಪ್ಯಾಕೇಟ್ ಮತ್ತು ಪಕ್ಷವೊಂದರ 936 ಪ್ರಚಾರ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ. ಏಪ್ರೀಲ್ 30ರಂದು ಚುನಾವಣಾ ಸಂಬಂಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. 19,613 ರೂ.ಮೂಲ್ಯದ 27.82 ಲಿಟರ್ ಮದ್ಯೆ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ..

ಪ್ರಧಾನಮಂತ್ರಿ ಮೋದಿ ಮನ್‌ ಕಿ ಬಾತ್‌: 100 ನೇ ಸಂಚಿಕೆ ದಾಖಲೆ

ಪ್ರಧಾನಿ ನರೇಂದ್ರ ಮೋದಿ ಅವರ ಬಹು ಜನಪ್ರಿಯ ಕಾರ್ಯಕ್ರಮ ಮನ್ ಕಿ ಬಾತ್ ಸಾಕಷ್ಟು ಯಶಸ್ವಿಯಾಗಿದೆ. ಇತ್ತೀಚಿಗೆ ಈ ಸರಣಿ ಕಾರ್ಯಕ್ರಮವು 100ನೇ ಕಂತು ಪ್ರಸಾರವಾಗಿ ಹಲವು ದಾಖಲೆ ನಿರ್ಮಿಸಿದೆ. 12 ಲಕ್ಷಕ್ಕೂ ಅಧಿಕ ಮಂದಿ ಸಾಮಾಜಿಕ ಜಾಲತಾಣಧಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಪ್ರಪಂಚಾದ್ಯಂತ ಪ್ರಧಾನಮಂತ್ರಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮವನ್ನು ಆಲಿಸಿ ಮೆಚ್ಚಿದ್ದಾರೆ. ಇನ್ನು ಇದೇ 100ನೇ ವಿಶೇಷ ಕಂತಿನ ಕುರಿತು 9 ಲಕ್ಷಕ್ಕೂ ಅಧಿಕ ಟ್ವೀಟ್‌ಗಳು ಹಾಗೂ ಇದಕ್ಕೆ ಮಿಲಿಯನ್‌ಗಟ್ಟಲೇ ಲೈಕ್ಸ್ ಹಾಗೂ ಪ್ರತಿಕ್ರಿಯೆಗಳು ಬಂದಿದೆ.

Published On: 02 May 2023, 03:46 PM English Summary: Vande Bharat : Stone pelting at Vande Bharat train

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.