ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಅ.22 ಮತ್ತು 23ರಂದು ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ 'ಯೆಲ್ಲೊ ಅಲರ್ಟ್' ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅ. 24ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗುತ್ತಿದ್ದು, ಮಾರುತಗಳು ದಿಕ್ಕು ಬದಲಿಸಿದರೆ ಕಲ್ಯಾಣ ಕರ್ನಾಟಕದಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆದರೆ ಈಗಿನ ಪ್ರಕಾರ ತುಮಕೂರು, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬುಧವಾರ ಮಳೆ-ಎಲ್ಲಿ, ಎಷ್ಟು?: ಕೊಪ್ಪಳ ಜಿಲ್ಲೆಯ ಬೇವೂರು ಹಾಗೂ ಹಾವೇರಿಯಲ್ಲಿ ಗರಿಷ್ಠ 10 ಸೆಂ.ಮೀ ಮಳೆಯಾಗಿದೆ. ಧಾರ
ವಾಡ, ದಾವಣಗೆರೆ 9, ಹೊಸಕೋಟೆ, ಬೆಂಗಳೂರು 7, ಚಿತ್ರದುರ್ಗ, ನೆಲಮಂಗಲ, ಮಾಗಡಿ, ಕಂಪ್ಲಿ 6, ಧಾರವಾಡ, ಚಿಂಚೋಳಿ, ಹರಿಹರ, ಚಿಕ್ಕಬಳ್ಳಾಪುರ, ಆನೇಕಲ್, ಬಾಗೇಪಲ್ಲಿ 3, ಮಂಡ್ಯ, ತಿಪಟೂರು,ಬಂಗಾರಪೇಟೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
Share your comments