1. ಸುದ್ದಿಗಳು

ರಾಜ್ಯದ ಕೈಮಗ್ಗ ನೇಕಾರರಿಗೆ ಆರ್ಥಿಕ ನೆರವು: ಜುಲೈ 30 ರವರೆಗೆ ಅವಧಿ ವಿಸ್ತರಣೆ

handloom

ಕೊರೋನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಠದಲ್ಲಿರುವ ಕೈಮಗ್ಗ ನೇಕಾರರಿಗೆ ನೇಕಾರರ ಸಮ್ಮಾನ್ ಯೋಜನೆ (weaver samman scheme) ಯಡಿ ರಾಜ್ಯ ಸರ್ಕಾರವು ವಾರ್ಷಿಕವಾಗಿ 2,000 ರೂಪಾಯಿಗಳ ಆರ್ಥಿಕ ನೆರವು ನೀಡುತ್ತಿದೆ. ಇದಕ್ಕಾಗಿ ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ (Application) ಸಲ್ಲಿಕೆ ಅವಧಿಯನ್ನು  ಜುಲೈ 30 ರವರೆಗೆ ವಿಸ್ತರಿಸಲಾಗಿದೆ.

 ಈ ಆರ್ಥಿಕ ನೆರವು ಪಡೆಯಲು ಕೈಮಗ್ಗ ನೇಕಾರರು ಕೈಮಗ್ಗ ನೇಕಾರಿಕೆಯಲ್ಲಿ ತೊಡಗಿರಬೇಕು. 4 ನೇ ರಾಷ್ಟ್ರೀಯ ಕೈಮಗ್ಗ  ಗಣತಿಯಲ್ಲಿ ನೊಂದಾಯಿಸಿರಬೇಕು. 2,000 ರೂಪಾಯಿಗಳನ್ನು  ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿರುವುದರಿಂದ ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆ ವಿವರ,  ಪೆಹಚಾನ್ ಕಾರ್ಡ್ ಮತ್ತು  ರೇಷನ್ ಕಾರ್ಡ್ ವಿವರ ಒದಗಿಸಿ ಸೇವಾಸಿಂಧು ತಂತ್ರಾಂಶದ ಮೂಲಕ ಆನ್‍ಲೈನ್‍ನಲ್ಲಿ (online) ಅರ್ಜಿ ಸಲ್ಲಿಸಬೇಕಾಗಿದೆ.

ಈಗಾಗಲೇ ಅರ್ಜಿಗಳನ್ನು ಸೇವಾಸಿಂಧು ತಂತ್ರಾಂಶದಲ್ಲಿ ಇಲಾಖೆಯಿಂದ ಅಪ್‍ಲೋಡ್ ಮಾಡುವ ಕಾರ್ಯ ಚಾಲನೆಯಲ್ಲಿದೆ. ಪೆಹಚಾನ್ ಕಾರ್ಡ್ ಪಡೆದ ನೇಕಾರರು ಸಂಬಂಧಿಸಿದ ಕೈಮಗ್ಗ ನೇಕಾರರ ಸಹಕಾರ ಸಂಘಗಳಲ್ಲಿ ಹಾಗೂ ಕಲಬುರಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೆಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಿರುವುದಿಲ್ಲ. ಈವರೆಗೆ ಅರ್ಜಿ ಸಲ್ಲಿಸದೇ ಇವರು ಪೆಹಚಾನ್ ಕಾರ್ಡ್ ಹೊಂದಿದ ಸಂಘಟಿತ ಮತ್ತು ಅಸಂಘಟಿತ ವಲಯದ ನೇಕಾರರು ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆಯ ವಿವರ, ನೇಕಾರರ ಪೆಹಚಾನ್ ಕಾರ್ಡ್ ಮತ್ತು ರೇಷನ್ ಕಾರ್ಡ್‍ಗಳ (Ration card) ಪ್ರತಿಯನ್ನು ಲಗತ್ತಿಸಿ ಆಯಾ ಜಿಲ್ಲೆಯಗಳ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ  ಜುಲೈ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.  ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ  ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.

Published On: 25 July 2020, 09:42 AM English Summary: weaver samman scheme application date extended upto 30th july

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.