ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ (ರಿ) ಕಲಬುರಗಿ ವಿಭಾಗ ಕಲಬುರಗಿ ಇವರ ವತಿಯಿಂದ “ಯುವಕರ ನಡೆ-ಕೃಷಿಯ ಕಡೆ ಕಾರ್ಯಾಗಾರ” ವನ್ನು ಸೆಪ್ಟೆಂಬರ್ 4 ರಂದು ಬೆಳಿಗ್ಗೆ 11.10 ಗಂಟೆಗೆ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ ಭವನದಲ್ಲಿ ಏರ್ಪಡಿಸಲಾಗಿದೆ.
ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಈ ಕಾರ್ಯಾಗಾರವನ್ನು ಉದ್ಘಾಟಿಸುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಮುರುಗೇಶ ಆರ್.ನಿರಾಣಿ, ಕೃಷಿ ಸಚಿವ ಬಿ.ಸಿ. ಪಾಟೀಲ, ಯೋಜನಾ ಇಲಾಖೆ ಸಚಿವ ವಿ. ಮುನಿರತ್ನ, ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಕಾರ್ಯಕ್ರಮದ ಘನ ಅಧ್ಯಕ್ಷತೆವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಎಸ್.ಎ. ಪಾಟೀಲ ಅವರು ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಎಕ್ಸ್ಟೆನ್ಷನ್ ಮ್ಯಾನೇಜ್ಮೆಂಟ್ (ಮ್ಯಾನೇಜ್) ಹಾಗೂ ನ್ಯಾಷನಲ್ ಇನ್ಸ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರ್ನ ಡೈರೆಕ್ಟರ್ ಜನರಲ್ರಾದ ಡಾ. ಚಂದ್ರಶೇಖರ ಇವರು Development of Agri Entrepreneurship though Incubation Center ಕುರಿತು, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಬಿ. ಚೆಟ್ಟಿ ಇವರು ಆರ್.ಕೆ.ವಿ.ವೈ.-ವರ್ಡ್ ಬ್ಯಾಂಕ್ ಪ್ರೊಜೆಕ್ಟ್ ಕುರಿತು, ತೆಲಂಗಾಣ ಹೈದ್ರಾಬಾದ್ ಎಕ್ಸ್ಟೆನ್ಷನ್ ಮ್ಯಾನೇಜ್ಮೆಂಟ್ (ಮ್ಯಾನೇಜ್) ಹಾಗೂ ನ್ಯಾಷನಲ್ ಇನ್ಸ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರ್ನ (ಎಂ ಆಂಡ್ ಇ) ಡೈರೆಕ್ಟರ್ರಾದ ಡಾ. ಗುಮ್ಗೋಳ ಮಠ ಅವರು ಎಫ್.ಪಿ.ಓ. ಕುರಿತು, ಡಾ. ಗೋಪಾಲ ಸುತಾರಿಯಾ ಅವರು ಗೋಕೃಪಾಮೃತ ಮತ್ತು ಸಾವಯವ ಕೃಷಿ ಕುರಿತು, ಕ್ರಿಯಾಜೆನ್ ಎಂ.ಡಿ. ಬಸವರಾಜ ಗಿರೆನ್ನವರ ಅವರು Designing Farming for young Farmers and agripreneurs ಕುರಿತು ಹಾಗೂ ತುಮಕೂರಿನ ಯುವ ಸಸ್ಯ ವಿಜ್ಞಾನಿ ಮಂಜುನಾಥ ಅವರು ಸಾವಯವ ಕೃಷಿ ಕುರಿತು ಅತಿಥಿ ಉಪನ್ಯಾಸಕರಾಗಿ ಮಾತನಾಡುವರು
ಕಾರ್ಯಕ್ರಮದಲ್ಲಿ ಕಲಬುರಗಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ. ರಾಜು ತೆಗ್ಗಳ್ಳಿ ಹಾಗೂ ಕಲಬುರಗಿ ಜಿಲ್ಲೆಯ ಹಾಳಸುಲ್ತಾನಪುರ ಅನುಭವಿ ರೈತ ಶರಣಬಸಪ್ಪ ಪಾಟೀಲ ಇವರನ್ನು ಈ ಸಂದರ್ಭದಲ್ಲಿ ವಿಶೇಷ ಸನ್ಮಾನ ಮಾಡಲಾಗುತ್ತದೆ. ಕೋವಿಡ್-19 ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗವನ್ನು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರ ನೀರಾವರಿ ಯೋಜನೆಗಳ ವಲಯದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಗಳೆ, ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ, ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಗುರುಬಸಪ್ಪಾ (ಅಪ್ಪು) ಕಣಕಿ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ್ ಖರ್ಬಿಕರ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ್, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾö್ನ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ ಶಶಿ, ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಸಿಮಿ ಮರಿಯಮ್ ಜಾರ್ಜ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಅವರು ಗೌರವ್ವಾನಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
Share your comments